ಕೇಂದ್ರದತ್ತ ಬೊಟ್ಟು ಅನ್ಯಾಯದ ಕ್ರಮ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಡಕ್ ಪತ್ರ

ಹೊಸದಿಲ್ಲಿ : ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ. ಇದು ರೈತರನ್ನು ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತುಸು ಖಡಕ್ ಆಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರವಾಗಿ ಪತ್ರ ಬರೆದು ಆಕ್ಷೇಪಿಸಿದ್ದಾರೆ.
ರಾಜ್ಯದ ವಿವಿಧೆಡೆ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮುಖ್ಯಮಂತ್ರಿಗಳು ಕೇಂದ್ರದತ್ತ ಬೆರಳು ತೋರಿ ಕಬ್ಬು ಬೆಳೆಗಾರರ ಹಿತರಕ್ಷಣೆಯಿಂದ ನುಣುಚಿಕೊಳ್ಳುವುದು ತರವಲ್ಲ. ಪ್ರಧಾನಿ ಮೋದಿ ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದ್ದು, ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಹಿತರಕ್ಷಣೆಗೆ ಹಿಂದೆAದಿಗಿAತಲೂ ಒಳ್ಳೇ ಕ್ರಮಗಳನ್ನೇ ಕೈಗೊಂಡಿದೆ ಎಂದು ವಿಸ್ತ್ರತವಾಗಿಯೇ ವಿವರಣೆ ನೀಡಿ ಎಂದು ಜೋಶಿ, ಸಿಎಂಗೆ ಚಾಟಿ ಬೀಸಿದ್ದಾರೆ.ಚಿ
ಕಬ್ಬಿನ ಬಾಕಿ ಶೂನ್ಯಕ್ಕೆ: ” ಹಿಂದೆಲ್ಲಾ ಕಬ್ಬಿನ ಬಾಕಿ ಪಾವತಿಗಾಗಿ ರೈತರು ಹೋರಾಟ ನಡೆಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಳೆಗಾರರ ಸಂಕಷ್ಟ ಪರಿಸ್ಥಿತಿ ಅರಿತು ಇದನ್ನು ನಿವಾರಿಸಿದೆ. ಈಗ ಕಬ್ಬು ಬಾಕಿಯನ್ನು ಶೂನ್ಯಕ್ಕೆ ತಂದಿದೆ. ೨೦೨೨-೨೩ ಮತ್ತು ೨೦೨೩-೨೪ರ ಸಕ್ಕರೆ ಹಂಗಾಮಿಗೆ ಕೇಂದ್ರ ಸರ್ಕಾರದಿಂದ ಕಬ್ಬಿನ ಬಾಕಿ ಶೂನ್ಯವಾಗಿದೆ. ೨೦೨೪-೨೫ಕ್ಕೆ ಸುಮಾರು ೫೦ ಲಕ್ಷ ಬಾಕಿ ಇದೆಯಷ್ಟೇ. ವಾಸ್ತವ ಹೀಗಿರುವಾಗ ತಾವು ಕೇಂದ್ರದತ್ತ ಬೆರಳು ತೋರುವುದು ಅನ್ಯಾಯದ ಪ್ರತೀಕ ಮತ್ತು ರೈತರನ್ನು ದಿಕ್ಕು ತಪ್ಪಿಸುವ ಕ್ರಮವಾಗಿದೆ” ಎಂದು ಸಿಎಂಗೆ ಜೋಶಿ ತಿರುಗೇಟು ನೀಡಿದ್ದಾರೆ.
೧೬,೫೦೦ ಕೋಟಿ ರೂಪಾಯಿ ಆರ್ಥಿಕ ನೆರವು: ಕಬ್ಬು ಬೆಳೆಗಾರರಿಗೆ ಸಕಾಲಿಕ ಪಾವತಿಗೆ ಅನುಕೂಲವಾಗಲೆಂದೇ ಕೇಂದ್ರ ಸರ್ಕಾರ ವಿವಿಧ ರೀತಿಯಲ್ಲಿ ನೆರವಾಗಿದೆ. ೨೦೧೪-೧೫ರಿಂದ ೨೦೨೦-೨೧ರ ಅವಧಿಯಲ್ಲಿ ವಿವಿಧ ಯೋಜನೆಗಳಡಿ ರೈತರ ಕಬ್ಬಿನ ಬಾಕಿ ಪಾವತಿಸಲು ಅನುವಾಗುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸುಮಾರು ೧೬,೫೦೦ ಕೋಟಿ ರೂ. ಆರ್ಥಿಕ ನೆರವನ್ನು ಒದಗಿಸಿದೆ ಎಂದು ಜೋಶಿ ಗಮನ ಸೆಳೆದಿದ್ದಾರೆ.
ಈಖP ೩೫೫ ರೂಪಾಯಿ ಕ್ವಿಂಟಾಲ್ ದರ: ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಅಂಅP) ಶಿಫಾರಸು ಮೇರೆಗೆ ಕೇಂದ್ರ ಸರ್ಕಾರ ಪ್ರತಿ ಸಕ್ಕರೆ ಹಂಗಾಮಿನಲ್ಲಿ (ಅಕ್ಟೋಬರ್-ಸೆಪ್ಟೆಂಬರ್) ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನೇ (ಈಖP) ನಿಗದಿಪಡಿಸುತ್ತದೆ. ಕಬ್ಬು ಬೆಳೆಯುವ ಎಲ್ಲಾ ರಾಜ್ಯಗಳಿಗೂ ಅನ್ವಯಿಸಿ ೨೦೨೫-೨೬ರಲ್ಲಿ ಉತ್ಪಾದನಾ ವೆಚ್ಚ ಒಳಗೊಂಡAತೆ ಈಖP ೩೫೫ ರೂಪಾಯಿ ಕ್ವಿಂಟಾಲ್ ದರದಲ್ಲಿ
ಅನುಮೋದಿಸಿದೆ. ಮತ್ತಿದು ಉತ್ಪಾದನಾ ವೆಚ್ಚಕ್ಕಿಂತ ಶೇ.೧೦೫.೨ರಷ್ಟು ಮಾರ್ಜಿನ್ ಆಗಿರುತ್ತದೆ.
ಈಖP ದರದಲ್ಲಿ ಗಮನಾರ್ಹ ಏರಿಕೆ: ಕಳೆದ ದಶಕದಿಂದ ಈಖPಯಲ್ಲಿ ಗಮನಾರ್ಹ ಏರಿಕೆ ಕಂಡುಬAದಿದೆ. ೨೦೧೩-೧೪ರಲ್ಲಿ ೨೧೦ ರೂಪಾಯಿ ಇದ್ದ ಈಖP ದರ ಇದೀಗ ೩೫೫ ರೂಪಾಯಿಗೆ ಏರಿಕೆಯಾಗಿದೆ. ಇದು ಈ ವರ್ಷದಲ್ಲಾದ ಬಲವಾದ ಏರಿಕೆ. ಅಲ್ಲದೇ, ಶೇ.೦.೧ರಷ್ಟು ಚೇತರಿಕೆಗೆ ರೈತರು ಪ್ರತಿ ಕ್ವಿಂಟಲ್‌ಗೆ ಹೆಚ್ಚುವರಿಯಾಗಿ ೩.೪೬ ರೂಪಾಯಿ ಪಡೆಯುತ್ತಾರೆ. ಕರ್ನಾಟಕದಲ್ಲಿ ಸರಾಸರಿ ಶೇ.೧೦.೫ರಷ್ಟು ಚೇತರಿಕೆಯೊಂದಿಗೆ ಪ್ರತಿ ಕ್ವಿಂಟಲ್‌ಗೆ ಈಖP ೩೬೩ ರೂಪಾಯಿ ಏರಿಕೆಯಾಗಿದೆ.
ಕಬ್ಬು ಖರೀದಿ ಮೌಲ್ಯ ಶೇ.೮೦ರಷ್ಟು ಹೆಚ್ಚಳ: ೨೦೧೩-೧೪ರಿಂದ ೨೦೨೪-೨೫ರ ಅವಧಿಯಲ್ಲಿ ಕಬ್ಬು ಖರೀದಿ ಮೌಲ್ಯ ಶೇ.೮೦ರಷ್ಟು ಹೆಚ್ಚಾಗಿದೆ. ಕಳೆದ ವರ್ಷ ಇದರ ಮೌಲ್ಯ ೧,೦೨,೬೮೭ ಕೋಟಿ ಆಗಿತ್ತು. ಕೇಂದ್ರ ಸರ್ಕಾರ ನಿಗದಿಪಡಿಸಿದ ಈಖP ದರದಂತೆ ಸಕ್ಕರೆ ಕಾರ್ಖಾನೆಗಳು ೧೪ ದಿನಗಳಲ್ಲಿ ರೈತರಿಗೆ ಸಕಾಲಿಕವಾಗಿ ಕಬ್ಬಿನ ವೆಚ್ಚ ಪಾವತಿಸುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ೧೯೬೬ರ ಕಬ್ಬು ನಿಯಂತ್ರಣ (ಆದೇಶ) ನಿಬಂಧನೆ ಜಾರಿಗೊಳಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ವಹಿಸಲಾಗಿದೆ.