ಡಿಸೇಲ್ ಸುರಿದುಕೊಂಡು ಮೂವರು ಆತ್ಮಹತ್ಯೆಗೆ ಯತ್ನ, ಶಾಸಕ ಜಿ.ಎಸ್. ಪಾಟೀಲಗೆ ಸಚಿವ ಸ್ಥಾನ ನೀಡಲು ಆಗ್ರಹ

ಗಜೇಂದ್ರಗಡ: ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಗಜೇಂದ್ರಗಡದಲ್ಲಿ ನಡೆದ ಪ್ರತಿಭಟನೆ ವೇಳೆ ಮೂವರು ಬೆಂಬಲಿಗರು ಡಿಸೇಲ್ ಸುರಿದುಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾರೆ.

ಸಂಗಪ್ಪ ತೇಜಿ, ರವಿಕುಮಾರ ಅಬ್ಬಿಗೇರಿ ಹಾಗೂ ಸಂಗಪ್ಪ ದಿಂಡೂರ ಎಂಬ ಕಾಂಗ್ರೆಸ್ ಮುಖಂಡರು ಶಾಸಕ ಜಿ.ಎಸ್. ಪಾಟೀಲರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಆತ್ಮಹತ್ಯೆಗೆ ಮುಂದಾಗಿದ್ದರು. ಆದರೆ, ನೆರೆದಿದ್ದ ಜನರು ಆತನನ್ನು ರಕ್ಷಿಸಿದ್ದಾರೆ.

ಹಿನ್ನಲೆ: ೫ ಭಾರಿ ಕ್ಷೇತ್ರದ ಶಾಸಕರಾಗಿರುವ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಗಜೇಂದ್ರಗಡದಲ್ಲಿ ಶನಿವಾರ ಮಹಿಳಾ ಮುಖಂಡರಿAದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದ ಈ ಸಂದರ್ಭದಲ್ಲಿ ಈ ಮೂವರು ಮೈಮೇಲೆ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ನಡೆಸಿದ್ದರು.